News Karnataka Kannada
Thursday, March 28 2024
Cricket
ಮಹಾರಾಷ್ಟ್ರ

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು ಬಾಲಕ ಸಾವು

ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
Photo Credit : Pixabay

ಮುಂಬೈ: ಚಾರ್ಜ್‌ಗೆ ಹಾಕಲಾದ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು ಅಜ್ಜಿಯೊಂದಿಗೆ ಮಲಗಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಮುಂಬೈನ ವಸಾಯಿ(ಪೂರ್ವ) ಉಪನಗರದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಶಬ್ಬೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಬಾಲಕನಿಗೆ ಶೇಕಡ 70 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಅಜ್ಜಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಜೆಯ ವೇಳೆಗೆ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಸೆ. 23, ಮುಂಜಾನೆ 4:30 ರಿಂದ 5 ಗಂಟೆ ನಡುವೆ ಈ ದುರಂತ ಸಂಭವಿಸಿದೆ. ಮನೆಯಲ್ಲಿ ರಾತ್ರಿ ಮಲಗುವ ಮುನ್ನ ಬಾಲಕನ ತಂದೆ ಸ್ಕೂಟರ್‌ನ ಬ್ಯಾಟರಿಯನ್ನು ಚಾರ್ಜ್ ಮಾಡಲು ಪ್ಲಗ್ ಮಾಡಿದ್ದರು. ಅಧಿಕ ಬಿಸಿಯಾದ ಕಾರಣ ಬ್ಯಾಟರಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಯುತ್ತಿದೆ ಎಂದು ಮಾಣಿಕಪುರ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಸಂಪತ್ ಪಾಟೀಲ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು