ಇನ್ನೆರಡು ದಿನ ತಂಪು ವಾತಾವರಣ ಮುಂದುವರೆಯಲಿದ್ದು, ಮಳೆಯಾಗುವ ಸಾಧ್ಯತೆ

ಇನ್ನೆರಡು ದಿನ ತಂಪು ವಾತಾವರಣ ಮುಂದುವರೆಯಲಿದ್ದು, ಮಳೆಯಾಗುವ ಸಾಧ್ಯತೆ

MS   ¦    Feb 22, 2021 06:32:12 PM (IST)
ಇನ್ನೆರಡು ದಿನ ತಂಪು ವಾತಾವರಣ ಮುಂದುವರೆಯಲಿದ್ದು, ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಹಲವೆಡೆ ಇನ್ನೆರಡು ದಿನಗಳ ಕಾಲ ತಂಪಾದ ವಾತಾವರಣ ಮುಂದುವರೆಯಲಿದ್ದು, ಬಂಗಾಳಕೊಲ್ಲಿ ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿ ಹೊಡೆತಕ್ಕೆ ಸಿಲುಕಿರುವುದರಿಂದ ಆಗಾಗ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬೀಸಮುದ್ರ ಎರಡು ಕಡೆಯಿಂದಲೂ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಬುಧವಾರ (ಫೆ.24) ಮುಂಜಾನೆ ಬಹುತೇಕ ಎಲ್ಲೆಡೆ ಒಣಹವೆ ವಾತಾವರಣ ಕಾಣಬಹುದು ಎಂದು ಹವಾಮಾನ ಇಳಾಖೆ ಹೇಳಿದೆ.ವಾಯುಭಾರ ಕುಸಿತದಿಂದಾಗಿ ಫೆ.22, 23ರಂದು ಬೆಂಗಳೂರು ಸೇರಿ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಗಳು ತಿಳಿಸಿವೆ.