ಕರ್ನಾಟಕ ತಲುಪಿದ ಕೊರೊನ ಲಸಿಕೆ

ಕರ್ನಾಟಕ ತಲುಪಿದ ಕೊರೊನ ಲಸಿಕೆ

MS   ¦    Jan 12, 2021 05:27:17 PM (IST)
ಕರ್ನಾಟಕ ತಲುಪಿದ ಕೊರೊನ ಲಸಿಕೆ

ಬೆಂಗಳೂರು: ರಾಜ್ಯಕ್ಕೆ ಇಂದು ಮೊದಲ ಹಂತದಲ್ಲಿ ಕೋವಿಡ್ ಲಸಿಕೆಯ 6,47,500 ಡೋಸ್ ಗಳು ಬಂದಿದ್ದು, ಅದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆಗಳನ್ನು, ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದ್ದು, ರಾಜ್ಯಕ್ಕೆ ಮೊದಲ ಹಂತದಲ್ಲಿ 6,47,500 ಕೋವಿಶೀಲ್ಡ್ ಲಸಿಕೆಯ ಡೋಸ್ ಪೂರೈಕೆಯಾಗಲಿದೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೆ ಲಸಿಕೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದ ಸಚಿವರು, ಒಂದು ವೈಲ್ ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದಾಗಿದ್ದು, ಪ್ರತಿ ಡೋಸ್ ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಪಡೆಯಬೇಕು. ಈ ಲಸಿಕೆಯಿಂದಗೀ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಇದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿಸಿದರು.

ಈ ಲಸಿಕೆ ಮಾರಾಟಕ್ಕೆ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದ. ಅವರೆ ಆರೋಗ್ಯ ಕ್ಷೇತ್ರದ ಸಿಬ್ಬಂದಿಸಿಬ್ಬಂದಿಗೆ, ಕೊರೋನ ನಿಯಂತ್ರಣ ಮಾಡುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾತ್ರ ಲಭ್ಯವಿದೆ ಎಂದು ಸ್ಪಷ್ಟಪಡಿಸಿದರು.