ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಅದರ ಮೈಸೂರು ಭೇಟಿಯ ಕುರಿತು ತನಿಖೆಗೆ ಆದೇಶಿಸಿದ ಹೈಕೋರ್ಟ್

ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಅದರ ಮೈಸೂರು ಭೇಟಿಯ ಕುರಿತು ತನಿಖೆಗೆ ಆದೇಶಿಸಿದ ಹೈಕೋರ್ಟ್

Ms   ¦    Jun 10, 2021 05:02:38 PM (IST)
ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಅದರ ಮೈಸೂರು ಭೇಟಿಯ ಕುರಿತು ತನಿಖೆಗೆ ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಲಾಕ್ ಡೌನ್ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

 

ಈ ಕುರಿತು ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ.

 

ಏಪ್ರಿಲ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಸಂಪೂರ್ಣ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ನಿಯಮಗಳನ್ನು ಮೀರಿ ಸಿಎಂ ಪುತ್ರ ವಿಜಯೇಂದ್ರ ತಮ್ಮ ಪತ್ನಿ ಜೊತೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ಹೋಗಿ ದರ್ಶನ ಪಡೆದಿದ್ದಲ್ಲದೆ ಪೂಜೆ ನೆರವೇರಿಸಿದ್ದರು, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದು, ಇದು ಎಷ್ಟು ಸರಿ, ಜನಸಾಮಾನ್ಯರಿಗೊಂದು ನಿಯಮ, ಜನಪ್ರತಿನಿಧಿಗಳಿಗೊಂದು ನಿಯಮವೇ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

 

ಈ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಇಂದು ಘಟನೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.