ಜಯಾಗೆ ಹೃದಯಾಘಾತ: ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

ಜಯಾಗೆ ಹೃದಯಾಘಾತ: ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

Dec 05, 2016 12:45:18 PM (IST)

ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತ ಸಂಭವಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿ ಜಯಾಲಲಿತಾ ಅಭಿಮಾನಿಗಳಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಅತ್ತ ಜಯಾಗೆ ಹೃದಯಾಘಾತ ವಿಚಾರ ತಿಳಿಯುತ್ತಿದ್ದಂತೆಯ ಚೆನ್ನೈನ ಆಪೋಲೋ ಆಸ್ಪತ್ರೆಯತ್ತ ಅಭಿಮಾನಿಗಳು ಧಾವಿಸುತ್ತಿದ್ದಂತೆಯೇ, ಇತ್ತ ಬೆಂಗಳೂರಿನಲ್ಲೂ ಅವರ ಅಭಿಮಾನಿಗಳು ಕಂಗಾಲಾಗಿದ್ದರೆ. ಬೆಂಗಳೂರಿನಲ್ಲಿರುವ ಜಯಾ ಅಭಿಮಾನಿಗಳಿಂದ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಿದರೆ ಎಂಬ ಮುನ್ನೆಚ್ಚರಿಕೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಿನ್ನೆ ರಾತ್ರಿ ರಾಜ್ಯದ ಕೆಎಸ್ ಆರ್ ಟಿಸಿ ಬಸ್ ಮೇಲೆ ತಿರುವಣ್ಣಾಮಲೈನಲ್ಲಿ ದಾಳಿ ನಡೆದ ಬಳಿಕ ರಾಜ್ಯದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬಸ್ ಗಳ ಸಂಚಾರ ಸ್ಥಗಿತವಾಗಿದ್ದು, ತಮಿಳುನಾಡಿನಲ್ಲಿ ಚೆನ್ನೈಗೆ ಸಂಪರ್ಕ ಕಲ್ಪಿಸುವ  ರಸ್ತೆಗಳನ್ನು ಬಹುತೇಕ ಮುಚ್ಚಲಾಗಿದೆ. ಹೀಗಾಗಿ ಅತ್ತಿಬೆಲೆಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದು, ಗೂಡ್ಸ್ ವಾಹನಗಳು ಮತ್ತು ಖಾಸಗಿ ವಾಹನಗಳ ಮಾತ್ರ ವಿರಳ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿವೆ.

ತಮಿಳುನಾಡು ಗಡಿ ಸಮೀಪದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರಿನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರಮುಖವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರಿನ  ಅತ್ತಿಬೆಲೆ ಹಾಗೂ ಅನೇಕಲ್ ನಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಅತ್ತಿಬೆಲೆ ಮತ್ತು ಆನೇಕಲ್ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.