ಮಾಲೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 152 ಪ್ರಯಾಣಿಕರು

ಮಾಲೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 152 ಪ್ರಯಾಣಿಕರು

YK   ¦    May 23, 2020 08:26:52 AM (IST)
ಮಾಲೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 152 ಪ್ರಯಾಣಿಕರು
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ, ಮಾಲ್ಡೀವ್ಸ್ ನ ಮಾಲೆಯಿಂದ ಮೇ 22 ಸಂಜೆ 6.50 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. 
 
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 152 ಮಂದಿ ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ ಒಂದು ಮಗು ಸೇರಿದಂತೆ 132 ಪುರುಷರು ಮತ್ತು 20 ಮಹಿಳೆಯರು ಇದ್ದಾರೆ.
 
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 152 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಇಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್ ಗಾಗಿ ಕಳುಹಿಸಿಕೊಡಲಾಗಿದೆ.
 
150 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.