ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮೃತಪಟ್ಟ ಪ್ರಯಾಣಿಕ

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮೃತಪಟ್ಟ ಪ್ರಯಾಣಿಕ

MS   ¦    Apr 07, 2021 04:08:58 PM (IST)
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮೃತಪಟ್ಟ ಪ್ರಯಾಣಿಕ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೇಗೆ ಎಲ್ಲಿ ಯಾರಿಗೆ ಸಾವು ಬರುತ್ತದೆ ಎಂದು ಹೇಳಲು ಸಾಧ್ಯವೇ ಆಗುತ್ತಿಲ್ಲ. ಹೌದು, ಬೆಂಗಳೂರು ನಗರದ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ .

ಮೃತಪಟ್ಟ ವ್ಯಕ್ತಿಯನ್ನು ಆನೇಕಲ್ ಚಿಕ್ಕನ ಹಳ್ಳಿಯ ಚಿನ್ನಪ್ಪ ಎಂದು ಗುರುತಿಸಲಾಗಿದ್ದು, ಅವರು ಸುಮಾರು 77 ವರ್ಷ ವಯಸ್ಸಿನವರು ಇರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದ್ದು, ಪ್ರಸ್ತುತ ದೊರೆತ ಮಾಹಿತಿಯ ಪ್ರಕಾರ, ಜಿಗಣಿಯಿಂದ ಅವರು ಬೆಂಗಳೂರಿಗೆ ಬಂದಿದ್ದರು ಎಂದು ವರದಿಯಾಗಿದೆ .

ಇಂದು ನಡೆಯುತ್ತಿರುವ ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಾರಿಗೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.