ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಎಲ್ಲರೂ ಗೌರವ ಕೊಡಬೇಕು. ಮುಖ್ಯಮಂತ್ರಿ ಸ್ಥಾನ ಗೌರವಯುತವಾಗಿದ್ದು, ಎಂದು ಸಿಎಂ ವಿರೋಧಿ ಬಣದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂದು ಯತ್ನಾಳ ಹೇಳಿಕೆ ನೀಡಿರುವುದು ಯತ್ನಾಳ್ ಅವರ ವೈಯಕ್ತಿಕ ಅಭಿಪ್ರಾಯ. ಮೀಸಲಾತಿ ಸಭೆಯಲ್ಲಿ ಯತ್ನಾಳ್ ಅಷ್ಟೇ ಭಾಗವಹಿಸಿಲ್ಲ. ಬೇರೆ ಬೇರೆ ಸಮುದಾಯದವರೂ ಭಾಗವಹಿಸಿದ್ದಾರೆ. ಆದರೆ ಸಿಎಂ ಸ್ಥಾನ ಗೌರವಯುತ ಸ್ಥಾನ, ಅದಕ್ಕೆ ಗೌರವ ಕೊಡಬೇಕು ಎಂದರು
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡದಿದ್ದರೆ ಸಮಾಜದ ಸಚಿವರು, ವಿವಿಧ ನಿಗಮ, ಮಂಡಳಿ ನೇಮಕಗೊಂಡವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬೇರೆಯವರ ಮೇಲೆ ಒತ್ತಡ ಹೇರುವುದು ಸರಿಯಲ್ಲ. ರಾಜೀನಾಮೆ ನೀಡಲು ಯಾರಿಗೂ ಬಲವಂತ ಮಾಡುವ ಅಧಿಕಾರವಿಲ್ಲ. ಅದಕ್ಕೂ ಮೀಸಲಾತಿಗೂ ಯಾವುದೇ ಸಂಬಂಧವಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಇದು ಜಾತ್ಯಾತೀತ ರಾಷ್ಟ್ರ, ಅವರವರ ಸಮುದಾಯಗಳಿಗೆ ಬೇಡಿಕೆ ಸಲ್ಲಿಸುವುದು ಅವರವರ ಹಕ್ಕು ಎಂದ ಮಾತ್ರಕ್ಕೆ ಈ ರೀತಿ ಬೇರೆಯವರ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಯತ್ನಾಳ್ ಹೇಳಿದ ಮಾತ್ರಕ್ಕೆ ರಾಜೀನಾಮೆ ಕೊಡಬೇಕು ಎಂಬುದೇನಿಲ್ಲ ಎಂದು ಸೂಚ್ಯವಾಗಿ ಹೇಳಿದರು ಎಂದು ತಿಳಿಸಿದರು.