ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ; ಲಾಕ್ ಡೌನ್ ಸಾಧ್ಯತೆ: ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ; ಲಾಕ್ ಡೌನ್ ಸಾಧ್ಯತೆ: ಸಚಿವ ಡಾ. ಸುಧಾಕರ್

MS   ¦    Feb 22, 2021 07:55:54 PM (IST)
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ; ಲಾಕ್ ಡೌನ್ ಸಾಧ್ಯತೆ: ಸಚಿವ ಡಾ. ಸುಧಾಕರ್

ಬೆಂಗಳೂರು: ದಿನೇದಿನೇ ದೇಶದಲ್ಲೆಡೆ ಹೆಚ್ಚುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅದರ ಮುಂದಿನ ನಡೆಯ ಬಗ್ಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಎರಡನೇ ಭೀತಿ ಹೆಚ್ಚಾದರೆ ಲಾಕ್ ಡೌನ್ ಹೇರುವ ಎಲ್ಲಾ ಸಾಧ್ಯತೆಗಳು ಇವೆ. ಮದುವೆ ಮನೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಕೊರೋನಾ ನಿಯಮ ಸರಿಯಾಗಿ ಪಾಲಿಸಲಾಗುತ್ತಿಲ್ಲ. ಆದ್ದರಿಂದ ರಾಜ್ಯದಲ್ಲಿ ಕೋವಿಡ್ ಭೀತಿ ಇನ್ನೂ ಹೆಚ್ಚಾಗಿದೆ ಎಂದು ಹೇಳಿದರು.

ನಂತರ ಮಾತನಾಡಿದ ಅವರು, ಹೀಗೆ ಕೋವಿಡ್ ಹೆಚ್ಚುತ್ತಲೆ ಹೋದರೆ ಅದನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುವುದು ಅನಿವಾರ್ಯವಾಗುತ್ತದೆ. ಮದುವೆ ಮನೆಯಲ್ಲಿ ಕೊರೋನಾ ನಿಯಮ ಪಾಲನೆ ಮಾಡಲು ಮಾರ್ಷಲ್ ಗಳನ್ನು ನೇಮಕ ಮಾಡಲು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.