ಐಎಂಎ ಬಹುಕೋಟಿ ವಂಚನೆ ಪ್ರಕರಣ: ಬೆಂಗಳೂರು ಜಿಲ್ಲಾಧಿಕಾರಿ ವಶಕ್ಕೆ

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಬೆಂಗಳೂರು ಜಿಲ್ಲಾಧಿಕಾರಿ ವಶಕ್ಕೆ

HSA   ¦    Jul 08, 2019 06:17:09 PM (IST)
ಐಎಂಎ ಬಹುಕೋಟಿ ವಂಚನೆ ಪ್ರಕರಣ: ಬೆಂಗಳೂರು ಜಿಲ್ಲಾಧಿಕಾರಿ ವಶಕ್ಕೆ

ಬೆಂಗಳೂರು: ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಐಎಂಎ ಕಂಪೆನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ವಶಕ್ಕೆ ಪಡೆದುಕೊಂಡಿದೆ.

ಐಎಂಎ ಪ್ರಕರಣದಲ್ಲಿ ಸರ್ಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ಎಸ್ ಐಟಿ ವಶಕ್ಕೆ ಪಡೆದಿರುವುದು ಇದು ಎರಡನೇಯದ್ದಾಗಿದೆ.

ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ನಾಗರಾಜ್ ಅವರನ್ನು ಇತ್ತೀಚೆಗಷ್ಟೇ ಎಸ್ ಐಟಿ ಪೊಲೀಸರು ಬಂಧಿಸಿದ್ದರು.

ವಿಚಾರಣೆಗಾಗಿ ವಿಜಯ್ ಶಂಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ವಿಚಾರಣೆ ಮುಗಿದ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಎಸ್ ಐಟಿ ಅಧಿಕಾರಿ ಮಾಹಿತಿ ನೀಡಿದರು.