ಕೋವಿಡ್‌: ರಾಜ್ಯದಲ್ಲಿ 1781 ಹೊಸ ಪ್ರಕರಣ ಪತ್ತೆ

ಕೋವಿಡ್‌: ರಾಜ್ಯದಲ್ಲಿ 1781 ಹೊಸ ಪ್ರಕರಣ ಪತ್ತೆ

Y.K   ¦    Nov 20, 2020 11:48:37 PM (IST)
ಕೋವಿಡ್‌: ರಾಜ್ಯದಲ್ಲಿ 1781 ಹೊಸ ಪ್ರಕರಣ ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 1,781 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿನ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,621 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,181 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,33,169 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 24,752 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 1,067 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,61,654ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,048ಕ್ಕೆ ಏರಿಕೆಯಾಗಿದೆ.