ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡ ಪೊಲೀಸ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡ ಪೊಲೀಸ್

MS   ¦    Jan 20, 2021 04:44:01 PM (IST)
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡ ಪೊಲೀಸ್

ಬೆಂಗಳೂರು : ಹಲವಾರು ದಿನಗಳಿಂದ ನಡೆಯುತ್ತಿರುವ ಕೃಷಿ ಮಸೂದೆಯ ವಿರುದ್ಧದ ಹೋರಾಟಕ್ಕೆ ಬೆಂಬಲಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜಭವನ ಮುತ್ತಿಗೆ ' ಹೋರಾಟವನ್ನು ಪೊಲೀಸರು ತಡೆದಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲೂ ಮುಖ್ಯವಾಗಿ ಮಾಜಿ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಡಾ.ಜಿ.ಪರಮೇಶ್ವರ್ , ತಸ್ವೀರ್ ಸೇಲ್ ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಿದ್ದನ್ನು ವಿಫಲಗೊಳಿಸಿದ್ದಾರೆ.

ಮೆಜೆಸ್ಟಿಕ್'ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್'ನಲ್ಲಿ ಸಭೆಯಾಗಿ ಬದಲಾಯಿತು . ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು . ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರು , ಮುಖಂಡರನ್ನು ಪೊಲೀಸರು ಮನವೊಲಿಸಲು ಯತ್ನಿಸಿದರು. ಆದರೂ ಪ್ರಯೋಜನವಾಗದ ಕಾರಣ ಮುಂಜಾಗ್ರತಾ ಕ್ರಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಕಾರ್ಯಕರ್ತರು , ರೈತರನ್ನು ಪೊಲೀಸರು ಮಹಾರಾಣಿ ಕಾಲೇಜಿನ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.