ಮೇ 24ರಂದು ನಡೆಯಲಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಮೇ 24ರಂದು ನಡೆಯಲಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

Ms   ¦    May 04, 2021 03:09:31 PM (IST)
ಮೇ 24ರಂದು ನಡೆಯಲಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 24 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ .

 

 ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ವರ್ಕ್ ಪ್ರಾಮ್ ಹೋಮ್ ನೀಡಲಾಗಿದೆ . ಹೀಗಾಗಿ ಮುಂದಿನ ಆದೇಶದವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ . ಪರೀಕ್ಷಾ ದಿನಾಂಕಗಳನ್ನು 15-20 ದಿನಗಳ ಮುನ್ನವೇ ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ .

 

ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡುವುದಾಗಿ ಹೇಳಿದ್ದಾರೆ .