ಬೆಂಗಳೂರಿನ 23 ಮಂದಿ ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

ಬೆಂಗಳೂರಿನ 23 ಮಂದಿ ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

HSA   ¦    Jun 27, 2020 02:17:57 PM (IST)
ಬೆಂಗಳೂರಿನ 23 ಮಂದಿ ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, 23 ಮಂದಿ ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ಆಗಿದೆ.

ಜೂನ್ 21ರಂದು 54ರ ಹರೆಯದ ಪೌರ ಕಾರ್ಮಿಕರೊಬ್ಬರು ಕೊವಿಡ್-19 ಸೋಂಕಿನಿಂದಾಗಿ ಜೆಜೆ ನಗರದಲ್ಲಿ ಮೃತಪಟ್ಟಿದ್ದರು. ಇದರ ಬಳಿಕ 80 ಮಂದಿ ಪೌರ ಕಾರ್ಮಿಕರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಜೆಜೆ ನಗರ, ಪಂಟರ ಪಾಲ್ಯ ಮತ್ತು ಇತರ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇದರಲ್ಲಿ 23 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.

ನಗರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರ ಕಾರ್ಮಿಕರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಿಸಲು ಬಿಬಿಎಂಪಿ ನಿರ್ಧರಿಸಿದೆ.