ತೀವ್ರ ಅನಾರೋಗ್ಯ: ಮಾತೆ ಮಹಾದೇವಿ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯ: ಮಾತೆ ಮಹಾದೇವಿ ಆಸ್ಪತ್ರೆಗೆ ದಾಖಲು

HSA   ¦    Mar 14, 2019 02:51:43 PM (IST)
ತೀವ್ರ ಅನಾರೋಗ್ಯ: ಮಾತೆ ಮಹಾದೇವಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಹುಅಂಗಾಂಗ ವೈಫಲ್ಯದಿಂದಾಗಿ ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರನ್ನು ನಗರದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಮೂತ್ರಕೋಶ, ಶ್ವಾಸಕೋಶ ಸಹಿತ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಮಾತೆ ಮಹಾದೇವಿ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ ಆಸ್ಪತ್ರೆಯ ಅಧ್ಯಕ್ಷ ಡಾ. ಎಚ್. ಸುದರ್ಶನ್ ಬಲ್ಲಾಳ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟಿದೆ. ಪ್ರತಿದಿನ ಸಮಾಲೋಚನೆ ನಡೆಸಿ, ಆರೋಗ್ಯ ಸ್ಥಿತಿ ಸುಧಾರಣೆ ಮಾಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದರು.