ರಾಜ್ಯದ 8 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿದ ಬಿಎಸ್ ಯಡಿಯೂರಪ್ಪ

ರಾಜ್ಯದ 8 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿದ ಬಿಎಸ್ ಯಡಿಯೂರಪ್ಪ

Ms   ¦    Jun 10, 2021 04:58:26 PM (IST)
ರಾಜ್ಯದ 8 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ದೃಢ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. 

 

 ಶೇ 5ಕ್ಕಿಂತ ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.

 

ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಮುಖ್ಯಮಂತ್ರಿ, ಸೋಂಕು ನಿಯಂತ್ರಣ ಕುರಿತು ಚರ್ಚಿಸಿದರು. ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ.

 

ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಕಾರಣ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ಕರಣಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಅಲ್ಲದೆ, ಮೈಸೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.