ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಲಾಕ್ ಡೌನ್

ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಲಾಕ್ ಡೌನ್

HSA   ¦    Mar 23, 2020 06:33:07 PM (IST)
ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಲಾಕ್ ಡೌನ್

ಬೆಂಗಳೂರು: ಲಾಕ್ ಡೌನ್ ನ್ನು ಜನರು ಕ್ಯಾರೇ ಮಾಡದ ಹಿನ್ನೆಲೆಯಲ್ಲಿ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರವು ನಿರ್ಧಾರ ತೆಗೆದುಕೊಂಡಿದೆ.

ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಇಂದಿನಿಂದಲೇ ಬಿಗಿಯಾದ ಲಾಕ್ ಡೌನ್ ಗೆ ಆದೇಶ ನೀಡಲಾಗಿದೆ.

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದರು. 9 ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಣಿಜ್ಯ ವ್ಯವಹಾರಗಳನ್ನು ಮಾ.31ರ ತನಕ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು, ಬೆಂಗಳೂರು ನಗರ, ಮೈಸೂರು, ಕಲುಬುರಗಿ, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಬಂದ್ ಇರುತ್ತದೆ.

ಸಂಪೂರ್ಣ ಬಂದ್ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಲಾಗಿದೆ. ಗಡಿ ಭಾಗವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ರಾಜ್ಯದಲ್ಲಿ ಇದುವರೆಗೆ 29 ಕೊವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಸುಧಾಕರ್ ತಿಳಿಸಿದ್ದಾರೆ.