ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ: 25 ಸಾವಿರ ಸಕ್ರೀಯ ಪ್ರಕರಣ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ: 25 ಸಾವಿರ ಸಕ್ರೀಯ ಪ್ರಕರಣ

YK   ¦    Nov 18, 2020 11:04:42 PM (IST)
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ: 25 ಸಾವಿರ ಸಕ್ರೀಯ ಪ್ರಕರಣ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 1,791 ಕೊರೋನಾ ಪ್ರಕರಣ ದಾಖಲಾಗಿದ್ದು ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,65,931ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,578 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,791 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,29,188 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,146 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.