ರಾಜ್ಯ ಬಿಜೆಪಿ ವಕ್ತಾರರಾಗಿ ಗಣೇಶ್ ಕಾರ್ಣಿಕ್ ನೇಮಕ

ರಾಜ್ಯ ಬಿಜೆಪಿ ವಕ್ತಾರರಾಗಿ ಗಣೇಶ್ ಕಾರ್ಣಿಕ್ ನೇಮಕ

HSA   ¦    Aug 01, 2020 01:56:34 PM (IST)
ರಾಜ್ಯ ಬಿಜೆಪಿ ವಕ್ತಾರರಾಗಿ ಗಣೇಶ್ ಕಾರ್ಣಿಕ್ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ತಂಡದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ರಾಜ್ಯ ವಕ್ತಾರರಾಗಿ ನೇಮಿಸಿರುವರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಅರವಿಂದ್ ಲಿಂಬಾವಳಿ, ನಿರ್ಮಲ ಕುಮಾರ್ ಸುರನ, ಶೋಭಾ ಕರಂದ್ಲಾಜೆ. ಮಾಲಿಕಯ್ಯ ಗುತ್ತೇದಾದ್, ತೇಜಸ್ವಿನಿ ಅನಂತಕುಮಾರ್, ಪ್ರತಾಪ್ ಸಿಂಹ, ಎಂಬಿ ನಂದೀಶ್, ಎಂ ಶಂಕರಪ್ಪ ಮತ್ತು ಎಂ. ರಾಜೇಂದ್ರ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಎನ್. ರವಿ ಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ ಮತ್ತು ಮಹೇಶ್ ಟಿ ಅವರನ್ನು ನೇಮಕ ಮಾಡಲಾಗಿದೆ.