ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ

ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ

HSA   ¦    Sep 16, 2020 11:24:04 AM (IST)
ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ದೆಹಲಿಗೆ ಭೇಟಿ ನೀಡಲಿದ್ದಾರೆ.

ಗುರುವಾರ ಬೆಳಗ್ಗೆ ಅವರು ಕಲಬುರಗಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಾರ್ಯಕ್ರಮದಲ್ಲಿ ಭಾಗಿಯಾಗುವರು ಮತ್ತು ಇದರ ಬಳಿಕ ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸುವರು.

ಗುರುವಾರ ಸಂಜೆ ಕರ್ನಾಟಕ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿರುವರು ಮತ್ತು ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಮರಳಲಿರುವರು.

ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ಆದರೆ ಇದುವರೆಗೆ ಇದು ದೃಢಪಟ್ಟಿಲ್ಲ.

ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಕೇಳಲು ಯಡಿಯೂರಪ್ಪ ಅವರು ದೆಹಲಿಗೆ ತೆರಳುವರು ಎಂದು ಮೂಲಗಳು ತಿಳಿಸಿವೆ.