ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19ಗೆ ಲಸಿಕೆ ಕಾರ್ಯಕ್ರಮವು ಆರಂಭವಾಗಿದ್ದು, ಬಳ್ಳಾರಿಯಲ್ಲಿ ಆರೋಗ್ಯ ಕಾರ್ಯಕರ್ತನೊಬ್ಬನ ಸಾವಿನ ಬಗ್ಗೆ ಗೊಂದಲ ಉಂಟಾಗಿತ್ತು.
43 ಹರೆಯದ ಆರೋಗ್ಯ ಇಲಾಖೆಯ ಸಿಬ್ಬಂದಿಯು ಹೃದಯಾಘಾತದಿಂದಾಗಿ ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.
ಶನಿವಾರ ಅವರಿಗೆ ಲಸಿಕೆ ನೀಡಲಾಗಿತ್ತು ಮತ್ತು ಸೋಮವಾರ ಬೆಳಗ್ಗಿನ ತನಕ ಅವರು ಸಾಮಾನ್ಯವಾಗಿದ್ದರು. ಲಸಿಕೆಯ 24 ಗಂಟೆಗಳಲ್ಲಿ ಯಾವುದೇ ರೀತಿಯ ಅಡ್ಡಪರಿಣಾಮಗಳು ಕಂಡುಬರಲಿಲ್ಲ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ವೇಳೆ ಎದೆ ನೋವಿನ ಬಗ್ಗೆ ತಿಳಿಸಿದ್ದರು ಮತ್ತು ಇದರ ಬಳಿಕ ಕುಸಿದು ಬಿದ್ದರು. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.