ಕರ್ನಾಟಕಕ್ಕೆ ಅತಿವೃಷ್ಟಿ ಪರಿಹಾರ: ಪ್ರಧಾನಿ ಮೋದಿ ಭರವಸೆ

ಕರ್ನಾಟಕಕ್ಕೆ ಅತಿವೃಷ್ಟಿ ಪರಿಹಾರ: ಪ್ರಧಾನಿ ಮೋದಿ ಭರವಸೆ

Y.K.   ¦    Oct 17, 2020 10:02:24 AM (IST)
ಕರ್ನಾಟಕಕ್ಕೆ ಅತಿವೃಷ್ಟಿ ಪರಿಹಾರ: ಪ್ರಧಾನಿ ಮೋದಿ ಭರವಸೆ

ನವದೆಹಲಿ: ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಕೈಗೊಳ್ಳಲು ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜತೆ ಶುಕ್ರವಾರ ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಕರ್ನಾಟಕದ ಜನತೆ ಜತೆ ನಾವಿದ್ದೇವೆ. ಕೇಂದ್ರ ಸರ್ಕಾರವು ಅಗತ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ಪ್ರವಾಹದಿಂದ ಹಾನಿಯಾಗಿರುವ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಂಡ ಕಳುಹಿಸುವ ಸಾಧ್ಯತೆ ಇದೆ.