ಮಂತ್ರಾಲಯ ರಾಘವೇಂದ್ರ ಮಠದ ಶ್ರೀಗಳಿಗೆ ಗೌರವ ಡಾಕ್ಟರೇಟ್

ಮಂತ್ರಾಲಯ ರಾಘವೇಂದ್ರ ಮಠದ ಶ್ರೀಗಳಿಗೆ ಗೌರವ ಡಾಕ್ಟರೇಟ್

HSA   ¦    Nov 19, 2020 02:50:15 PM (IST)
ಮಂತ್ರಾಲಯ ರಾಘವೇಂದ್ರ ಮಠದ ಶ್ರೀಗಳಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಮಂತ್ರಾಲಯ ಶ್ರೀ ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಭೇಂದ್ರ ತೀರ್ಥ ಸ್ವಾಮಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು.

ನ.20ರಂದು ನಡೆಯಲಿರುವ ವಿಶ್ವ  ವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಈ ಗೌರವ ನೀಡಲಾಗುತ್ತದೆ.

ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ವಿಶ್ವವಿದ್ಯಾಲಯದ ಈ ನಿರ್ಧಾರಕ್ಕೆ ಅಂಕಿತ ಹಾಕಿರುವರು.