ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

YK   ¦    Aug 08, 2020 10:38:08 AM (IST)
ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು ಇವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿದ ಅವರು ‘ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್‌ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸುವಂತೆ ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

 

ಯತೀಂದ್ರ ಅವರ ತಂದೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್ ದೃಢಪಟ್ಟಿತ್ತು. ಅವರು ಆ.3 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.