ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು

ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು

YK   ¦    Mar 26, 2020 09:11:28 AM (IST)
ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು: ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಒಂದನೇ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ.

ಸಂಜನಯನಗರದಲ್ಲಿ ಚೆಕ್ ಪೋಸ್ಟ್ ನಲ್ಲಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದು ಇಂದು ನಸುಕಿನ ಜಾವ ವಿಚಾರಣೆಗೆಂದು ಸ್ಥಳಕ್ಕೆ ಕರೆದುಕೊಂಡ ವೇಳೆ ಒಬ್ಬ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಆರೋಫಿಯ ಕಾಲಿಗೆ ಗುಂಡು ಹೊಡೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ.