ರಾಜ್ಯದ ಗೃಹಮಂತ್ರಿಗೆ ಕೊರೋನಾ ಪಾಸಿಟಿವ್

ರಾಜ್ಯದ ಗೃಹಮಂತ್ರಿಗೆ ಕೊರೋನಾ ಪಾಸಿಟಿವ್

Keerthana Bhat   ¦    Sep 16, 2020 01:31:46 PM (IST)
ರಾಜ್ಯದ ಗೃಹಮಂತ್ರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದ ಗೃಹಮಂತ್ರಿ ಬಸವರಾಜ ಬೊಮ್ಮಯಿ ಅವರ ಕೊರೋನಾ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ.

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್ 19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೊಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ ಹಾಗೂ ಆರೋಗ್ಯವಾಗಿದ್ದು ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.