ಇಂದು ರಾಯಚೂರಿನಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಇಂದು ರಾಯಚೂರಿನಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 02, 2016 12:46:57 PM (IST)

ರಾಯಚೂರು: 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ಇಂದು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ನೆರವೇರಿಸಿದರು.

ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆರಂಭಗೊಂಡ ಸಮ್ಮೇಳನವು, ಮುಖ್ಯ ವೇದಿಕೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ತುಂಗೆಯ ತೊಟ್ಟಿಲಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ನಡೆಯಿತು. ಕರ್ನಾಟಕ ಸಂಘದಿಂದ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಮತ್ತು ಅವರ ಪತ್ನಿ ರಾಜಲಕ್ಷ್ಮೀ ಹಾಗೂ ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರನ್ನು ಮೆರವಣಿಗೆ ಮಾಡಲಾಯಿತು.  ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಆರು ದಶಕಗಳ ನಂತರ ರಾಯಚೂರಿನಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಹಜವಾಗಿ ಇಲ್ಲಿನ ಸಾಹಿತ್ಯಾಭಿಮಾನಿಗಳಲ್ಲಿ ಸಂತೋಷ, ಉತ್ಸಾಹ ಮೂಡಿಸಿದೆ.1955ರಲ್ಲಿ ಆದ್ಯ ರಂಗಾಚಾರ್ಯರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆದಿತ್ತು.

ಘನಮಠ ಶಿವಯೋಗಿ ವೇದಿಕೆಯಲ್ಲಿ ಮಹಿಳೆ ಆಧುನಿಕತೆಗೆ ಮುಖಾಮುಖಿ ಮಧ್ಯಾಹ್ನ 2.30. ಎರಡನೇ ಗೋಷ್ಠಿ ಸಮಾನ ಶಿಕ್ಷಣ ನೀತಿಯ ಸಾಧ್ಯತೆಗಳು ಸಂಜೆ 4.30ಕ್ಕೆ ಇದೆ. 2015ರಲ್ಲಿ ರಾಯಚೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. ಅದರೆ ಬರ, ರೈತರ ಅತ್ಮಹತ್ಯೆ ಕಾರಣದಿಂದಾಗಿ ಮೂಂದೂಡಲಾಗಿತ್ತು.More Images