ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ದಿನ ಮುಂದೂಡಿದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ದಿನ ಮುಂದೂಡಿದ ಡಿಕೆಶಿ

HSA   ¦    May 19, 2020 07:03:44 PM (IST)
ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ದಿನ ಮುಂದೂಡಿದ ಡಿಕೆಶಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕವಾಗಿರುವ ಡಿ.ಕೆ.ಶಿವಕುಮಾರ್ ಅವರು ಮೇ 31ರಂದು ಅಧಿಕಾರ ಸ್ವೀಕರಿಸುತ್ತೇನೆಂದು ಹೇಳಿದ್ದು, ಈಗ ಇದನ್ನು ಮುಂದೂಡಲಾಗಿದೆ.

ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೂಡಲಾಗಿದೆ. ಆದರೆ ಮುಂದೊಂದು ದಿನ ಸಾಂಕೇತಿಕವಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ ಎಂದರು.

ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿದರೂ ಗ್ರಾಮ, ವಾರ್ಡ್ ಸಹಿತ ರಾಜ್ಯದ ಉದ್ದಗಲಕ್ಕೂ ದೀಪ ಹಚ್ಚುವ ಕಾರ್ಯಕ್ರಮ ಮಾಡಲಿದ್ದೇವೆ ಎಂದು ತಿಳಿಸಿದರು.