ವಿಧಾನಸೌಧದ ಸುತ್ತಮುತ್ತ ಫೆ.22 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ

ವಿಧಾನಸೌಧದ ಸುತ್ತಮುತ್ತ ಫೆ.22 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ

MS   ¦    Feb 21, 2021 04:45:41 PM (IST)
ವಿಧಾನಸೌಧದ ಸುತ್ತಮುತ್ತ ಫೆ.22 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮುದಾಯ ಪ್ರತಿಭಟನೆ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಪಂಚಮಸಾಲಿ ಸಮುದಾಯದಿಂದ ಮೀಸಲಾತಿಗೆ ಆಗ್ರಹಿಸಿ, ಇಂದು ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಈ ಬಳಿಕ, ಮಾರ್ಚ್ 4ರವರೆಗೆ ಸಮುದಾಯದ ಶ್ರೀಗಳು ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.

ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಡಿಸಿಪಿ ಇಶಾ ಪಂತ್ ನೇತೃತ್ವದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅದರಲ್ಲೂ ಪಂಚಮಸಾಲಿ ಪ್ರತಿಭಟನೆಯ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಫೆಬ್ರವರಿ 22ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.