ಗೋಹತ್ಯೆ ನಿಷೇಧ ಕಾನೂನು ಕಡ್ಡಾಯವಾಗಿ ಜಾರಿಗೊಳಿಸಿ: ಯಡಿಯೂರಪ್ಪ

ಗೋಹತ್ಯೆ ನಿಷೇಧ ಕಾನೂನು ಕಡ್ಡಾಯವಾಗಿ ಜಾರಿಗೊಳಿಸಿ: ಯಡಿಯೂರಪ್ಪ

HSA   ¦    Jan 20, 2021 11:59:55 AM (IST)
ಗೋಹತ್ಯೆ ನಿಷೇಧ ಕಾನೂನು ಕಡ್ಡಾಯವಾಗಿ ಜಾರಿಗೊಳಿಸಿ: ಯಡಿಯೂರಪ್ಪ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ-2020ಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲು ವಿಳಂಬ ಮಾಡಬಾರದು ಎಂದು ನಿರ್ದೇಶಿಸಿದರು.

ರಾಜ್ಯದಲ್ಲಿ ಕೊರೋನಾ ಸಮಯದಲ್ಲಿ ಶಾಲೆಗಳು ಮುಚ್ಚಿದ್ದ ಕಾರಣದಿಂದಾಗಿ ಹೆಚ್ಚಿನ ಬಾಲ್ಯ ವಿವಾಹಗಳು ನಡೆದಿದೆ ಎಂಬ ಮಾಹಿತಿ ಬಂದಿದೆ. ಆದರೆ ಇದರ ಬಗ್ಗೆ ಪರಿಶೀಲಿಸಿ ಎಂದು ನಿರ್ದೇಶನ ನೀಡಿದರು.