ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಹೆಚ್.ಡಿ.ದೇವೇಗೌಡ

ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಹೆಚ್.ಡಿ.ದೇವೇಗೌಡ

Jan 06, 2016 11:05:56 AM (IST)

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಳ್ಳಿ ಹಾಕಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಡೆದ ವಿಧಾನ ಪರಿಷತ್  ಚುನಾವಣೆಯಲ್ಲಿ ಹಣಬಲ ಪ್ರಮುಖ ಪಾತ್ರವಹಿಸಿತ್ತು. ಗೆದ್ದಿರುವ ನಮ್ಮ ಪಕ್ಷದ ನಾಲ್ವರು ಅಭ್ಯರ್ಥಿಗಳು ಅವರ ಸ್ವ ಸಾಮರ್ಥ್ಯದಿಂದ  ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.  ಲೋಕಾಯುಕ್ತ ಸಂಸ್ಥೆ ವ್ಯವಸ್ಥಿತವಾಗಿ ಹಾಳಾಗಿದ್ದು, ಅದನ್ನು ಯಾರೊಬ್ಬರು ಸುಧಾರಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಹುದ್ದೆಗೆ ಉತ್ತಮ ನ್ಯಾಯಾಧೀಶರನ್ನು ನೇಮಕ ಮಾಡಿದರೂ ಪ್ರಯೋಜನ ಆಗದು ಎಂದು  ಅವರು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರದ ಹೊಸ ಬೆಳೆ ವಿಮೆ ಯೋಜನೆಯಡಿ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತವನ್ನು ಏರಿಕೆ ಮಾಡಿದರೆ ಅದಕ್ಕೆ ತಮ್ಮ ವಿರೋಧವರಿವೆ ಎಂದು ದೇವೇಗೌಡರು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ವಿದೇಶ ಪ್ರವಾಸವನ್ನು ಕಡಿತಗೊಳಿಸಿ ಅಂತರಿಕ ಸಮಸ್ಯೆಗಳಾದ ರೈತರ ಆತ್ಮಹತ್ಯೆ ಬರ ಪರಿಸ್ಥಿತಿ ಮುಂತಾದವುಗಳ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.