ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್‌ನ ನೂತನ ಸದಸ್ಯರು

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್‌ನ ನೂತನ ಸದಸ್ಯರು

Jan 06, 2016 02:35:37 PM (IST)

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ವಿಧಾನ ಪರಿಷತ್ ನ 25 ಸದಸ್ಯರ ಅವಧಿಯು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದ್ದು, ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶಾಶ್ವತ ಶಾಸನಸಭೆ ಎಂದೇ ಕರೆಯುವ ವಿಧಾನ ಪರಿಷತ್ತಿನಿಂದ ಪ್ರತಿ ಆರು ವರ್ಷಕ್ಕೊಮ್ಮೆ ಮೂರನೇ ಒಂದರಷ್ಟು ನಿವೃತ್ತರಾಗಬೇಕೆಂಬ ವಾಡಿಕೆಯಂತೆ 25 ಶಾಸಕರ ಸದಸ್ಯತ್ವವು ಮಂಗಳವಾರ ಮುಕ್ತಾಯವಾಗಿದ್ದು, ಅದೇ ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ನೂತನ 25 ಸದಸ್ಯರ ಅವಧಿಯು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಪ್ರಮುಖರು ಭಾಗಿಯಾಗಿದ್ದರು.