ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಪಾರ್ಥಿವ ಶರೀರಕ್ಕೆ ಸಿಎಂ ಯಡಿಯೂರಪ್ಪ ನಮನ

ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಪಾರ್ಥಿವ ಶರೀರಕ್ಕೆ ಸಿಎಂ ಯಡಿಯೂರಪ್ಪ ನಮನ

YK   ¦    Jan 11, 2020 05:05:33 PM (IST)
ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಪಾರ್ಥಿವ ಶರೀರಕ್ಕೆ ಸಿಎಂ ಯಡಿಯೂರಪ್ಪ ನಮನ

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮನ ಸಲ್ಲಿಸಿದರು.

ಹಿರಿಯ ಸಂಶೋಧಕ, ವಿದ್ವಾಂಸ, ಬರಹಗಾರ ಡಾ. ಎಂ.ಚಿದಾನಂದಮೂರ್ತಿ(88) ಶನಿವಾರ ನಸುಕಿನ 3.45ಕ್ಕೆ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕನ್ನಡ ಭಾಷಶಾಸ್ತ್ರ, ವಚನ ಸಾಹಿತ್ಯ ಸಂಶೋಧನೆ ಮತ್ತು ಶಾಸನ ಶಾಸ್ತ್ರದಲ್ಲಿ ಅಪಾರವಾದ ಕೊಡುಗೆ ನೀಡಿದ್ದಾರೆ.

ಸಿಎಂ ಭೇಟಿ ವೇಳೆ ವಸತಿ ಸಚಿವ ವಿ.ಸೋಮಣ್ಣ ಉಪಸ್ಥಿತರಿದ್ದರು.