ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ ಬಿ ಎಸ್ ವೈ

ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ ಬಿ ಎಸ್ ವೈ

MS   ¦    Jan 18, 2021 05:05:30 PM (IST)
ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ ಬಿ ಎಸ್ ವೈ

ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಮಾತಿನ ಚಾಟಿ ಬೀಸಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, "ಮರಾಠಿ ಸಂಸ್ಕೃತಿ ಹಾಗೂ ಭಾಷೆಯ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ" ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಈ ಬಗ್ಗೆ ಮುಂದುವರೆದು ಮಾತನಾಡಿರುವ ಅವರು, ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಅವರನ್ನು ಹೊಡೆಯುವ ಕಾರ್ಯ ಮಾಡುವ ಅಗತ್ಯವಿಲ್ಲ ಎಂದು ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.