ಪ್ರತೀ ವಿದ್ಯುತ್ ಯೂನಿಟ್ ದರದ ಮೇಲೆ 30 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿದ ಕೆಇಆರ್ ಸಿ

ಪ್ರತೀ ವಿದ್ಯುತ್ ಯೂನಿಟ್ ದರದ ಮೇಲೆ 30 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿದ ಕೆಇಆರ್ ಸಿ

Ms   ¦    Jun 09, 2021 07:34:17 PM (IST)
ಪ್ರತೀ ವಿದ್ಯುತ್ ಯೂನಿಟ್ ದರದ ಮೇಲೆ 30 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿದ ಕೆಇಆರ್ ಸಿ

ಬೆಂಗಳೂರು: ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಲು ಯೋಜಿಸಿರುವ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 30 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಬುಧವಾರ ಆದೇಶ ಹೊರಡಿಸಿದೆ.

ಪ್ರತಿ ಯೂನಿಟ್ ಗೆ 30 ಪೈಸೆ ಏರಿಕೆಗೆ ಕೆಇಆರ್ ಸಿ ಅನುಮೋದನೆ ನೀಡಿದೆ. ಏಪ್ರಿಲ್ 1ರಿಂದ ಹೊಸ ದರ ಪೂರ್ವಾನ್ವಯವಾಗಲಿದೆ. ಹಿಂಬಾಕಿಯನ್ನು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಎರಡು ಸಮಾನ ಕಂತುಗಳಲ್ಲಿ ವಸೂಲಿ‌ ಮಾಡಲು ಆಯೋಗ ಅವಕಾಶ ಕಲ್ಪಿಸಿದೆ ಎಂದು ವರದಿಗಳು ತಿಳಿಸಿವೆ. 

ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳೂ ದರ ಹೆಚ್ಚಳಕ್ಕೆ ಮನವಿ ಸಲ್ಲಿಸಿದ್ದ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಂಪನಿಗಳು ಪ್ರತಿ ಯೂನಿಟ್ ಗೆ ಸರಾಸರಿ ₹ 1.35 ಹೆಚ್ಚಳ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು. ಆದರೆ 30 ಪೈಸೆ ಏರಿಕೆಗೆ ಅನುಮತಿ ದೊರೆತಿದೆ.