ಮಂಗಳೂರಿನಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರಿಕೆ

ಮಂಗಳೂರಿನಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Ms   ¦    Jun 10, 2021 06:15:55 PM (IST)
ಮಂಗಳೂರಿನಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕೌನ್ ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ . ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹತೋಟಿಗೆ ಬರದ ಕಾರಣ ಮತ್ತೆ ಒಂದು ವಾರ ಲಾಕೌನ್ ವಿಸ್ತರಣೆಗೆ ಸಿಎಂ ಗೆ ಮನವಿ ಮಾಡಿದ್ದಾರೆ .

 

 ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿದ್ದಾರೆ . ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳೊಂದಿಗೆ ಸಿಎಂ ಸಭೆ ನಡೆಸಿದ್ದು ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ .

 

 ಈ ಕುರಿತು ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ನಮ್ಮ ಜಿಲ್ಲೆಗೆ ವ್ಯಾಕ್ಸಿನ್ ಪ್ರಮಾಣವನ್ನೂ ಹೆಚ್ಚಿಸಲು ಬೇಡಿಕೆ ನೀಡಿದ್ದೇವೆ . ಆಯಾ ಜಿಲ್ಲೆಗಳಲ್ಲಿ ಲಾಕೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು ಜೂನ್ 14 ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು. 

 

ಇನ್ನು ಈ ಮನವಿಗೆ ಮಾಡಿದ ಸಿಎಂ, ಕೈಗಾರಿಕೆಗಳಿಗೆ ಸ್ವಲ್ಪ ಮಟ್ಟದ ರಿಯಾಯಿತಿ ನೀಡಿ ಲಾಕ್ ಡೌನ್ ವಿಸ್ತರಣೆ ಮಾಡಲು ಸೂಚನೆ ನೀಡಿದ್ದಾರೆ . ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರ ಸಭೆ ಕರೆದು ಜಿಲ್ಲಾ ಮಟ್ಟದಲ್ಲಿ ನಿರ್ಣಯ ಮಾಡಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ .