ಎಲ್ಲಾ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ
ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿ ಸ್ಥಗಿತಗೊಂಡಿದ್ದ ಶೈಕ್ಷಣಿಕ ಕ್ಷೇತ್ರ ಪುನಃ ಪ್ರಾರಂಭಗೊಂಡಿದ್ದು, ಈಗಾಗಲೇ ಎಸ್ ಎಸ್ ಎಲ್ ಸಿ, ಪಿಯುಸಿ ಶಿಕ್ಷಣಗಳ ಅನೇಕ ತರಗತಿಗಳು ಪ್ರಾರಂಭವಾಗಿದ್ದವು. ಇದೀಗ ಫೆಬ್ರವರಿ 1ರಿಂದ 9-12ನೇ ತರಗತಿಗಳಿಗೆ ಫುಲ್ ಡೇ ಕ್ಲಾಸ್ಗಳು ನಡೆಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.