NewsKarnataka
Sunday, September 26 2021

ಕ್ಯಾಂಪಸ್

ವಿಕಾಸ್‌ ವಿದ್ಯಾ ಸಂಸ್ಥೆಯಲ್ಲಿ ವ್ಯಾಕ್ಸಿನೇಷನ್‌ ಕಾರ್ಯಕ್ರಮ

ಮಂಗಳೂರು ; ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಿಕಾಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‍ನಲ್ಲಿ 06.07.2021 ಮಂಗಳವಾರದಂದು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಯಶಸ್ವಿಯಾಗಿ ನಡೆಯಿತು.
ಜಿಲ್ಲಾ ಆರೋಗ್ಯ ಇಲಾಖೆಯ ಡಾ| ರಾಜೇಶ್, ಡಾ| ದೀಪ್ತಿ, ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಐಶ್ವರ್ಯ, ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ| ಅಜಯ್ ಠಾಕೂರ್, ವಿಕಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮೋಹನಾ, ಸಂಸ್ಥೆಯ ಟ್ರಸ್ಟಿ ಶ್ರೀ ಜೆ. ಕೊರಗಪ್ಪ, ವಿಕಾಸ್ ಶಿಕ್ಷಣ ಸಂಸ್ಥೆಯ ಸಂಯೋಜಕರಾದ ಶ್ರೀ ಪಾರ್ಥಸಾರಥಿ ಜೆ. ಪಾಲೆಮಾರ್ ಅಭಿಯಾನವನ್ನು ಉದ್ಘಾಟಿಸಿದರು. ಸಂಸ್ಥೆಯ ಪದವಿ ಹಾಗೂ ಫಿಜಿಯೋಥೆರಪಿ ವಿಭಾಗದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 150 ಜನ ವ್ಯಾಕ್ಸಿನೇಷನ್ ಪಡೆದುಕೊಂಡರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!