NewsKarnataka
Sunday, November 28 2021

ಕ್ಯಾಂಪಸ್

ಕ್ಯಾಂಪಸ್‌ ಸಂದರ್ಶನ: ದಾಖಲೆ ಸಂಖ್ಯೆಯಲ್ಲಿ ಉದ್ಯೋಗ ಪಡೆದ ಸಹ್ಯಾದ್ರಿ ವಿದ್ಯಾರ್ಥಿಗಳು

ಮಂಗಳೂರು: ಮಂಗಳೂರು ನಗರದ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನಲ್ಲಿ 2021ರಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದ ದಾಖಲೆಯ 645 ವಿದ್ಯಾರ್ಥಿಗಳು ಕ್ಯಾಂಪಸ್‌ ಸಂದರ್ಶನದಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಶ್‌ ಎಸ್‌. ಹೇಳಿದರು.

ಮಂಗಳೂರು ಪತ್ರಿಕಾಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್‌–19 ಸಂಕಷ್ಟದ ಹೊರತಾಗಿಯೂ 2021ರ ಶೈಕ್ಷಣಿಕ ವರ್ಷದಲ್ಲಿ ದಾಖಲೆಯ 192 ಕಂಪನಿಗಳು ಕ್ಯಾಂಪಸ್‌ ಸಂದರ್ಶನಕ್ಕೆ ಭೇಟಿ ನೀಡಿವೆ. ಅತಿ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗಾವಕಾಶ ಪಡೆದಿದ್ದಾರೆ. ₹ 40 ಲಕ್ಷ ವಾರ್ಷಿಕ ವರಮಾನದ ಉದ್ಯೋಗವನ್ನು ಕೂಡ ವಿದ್ಯಾರ್ಥಿಗಳು ಗಿಟ್ಟಿಸಿಕೊಂಡಿದ್ದಾರೆ’ ಎಂದು ಹೇಳಿದರು.

‘ಕ್ಯಾಪ್‌ಜೆಮಿನಿ ಕಂಪನಿಯಲ್ಲಿ 88 ವಿದ್ಯಾರ್ಥಿಗಳು, ಇನ್ಫೊಸಿಸ್‌ 82, ಕಾಗ್ನಿಝೆಂಟ್‌, ಟಿಸಿಎಸ್‌ ಕಂಪೆನಿಯಲ್ಲಿ 62 ಹೀಗೆ ಹಲವು ಕಂಪನಿಗಳಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಉದ್ಯೋಗ ಪಡೆಯುವ ಗುರಿಯನ್ನು ಹೊಂದಲಾಗಿದೆ’ ಎಂದರು.

‘ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲ ವರ್ಷದಿಂದ ಅಂತಿಮ ವರ್ಷದ ವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ನಿಖರವಾದ ಉದ್ಯೋಗ ತರಬೇತಿಯನ್ನು ನೀಡುತ್ತಿದೆ. ಉದ್ಯೋಗಕ್ಕೆ ಬೇಕಾದ ವಿವಿಧ ಕೌಶಲಗಳ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದು ಅವರಿಗೆ ಕ್ಯಾಂಪಸ್‌ ಸಂದರ್ಶನಕ್ಕೆ ಅನುಕೂಲವಾಗುತ್ತಿವೆ’ ಎಂದು ಹೇಳಿದರು.

ಸಹ್ಯಾದ್ರಿ ಕಾಲೇಜಿನ ಪ್ಲೇಸ್‌ಮೆಂಟ್‌ ಡೀನ್‌ ಪ್ರೊ.ರಶ್ಮಿ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!