News Kannada
Sunday, December 04 2022

ಕ್ಯಾಂಪಸ್

ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Photo Credit :

ಶಿವಮೊಗ್ಗ:  ಕುವೆಂಪು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಶುಲ್ಕ ಹೆಚ್ಚಳ ಹಾಗೂ ಹೆಚ್ಚಿಸಿರುವ ಶುಲ್ಕ ವಾಪಸ್ ಪಡೆಯುವಂತೆ ಎಬಿವಿಪಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಕೋವಿಡ್ ಸಂದರ್ಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ ಆದರೂ ಪರೀಕ್ಷಾ ಶುಲ್ಕವನ್ನು ಕಟ್ಟಿಕೊಳ್ಳಲಾಗಿದೆ ನಡೆಯಬಾರದಿತ್ತು ಪರೀಕ್ಷೆಗೆ ಪರಿಗಣಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಪರೀಕ್ಷೆಯಲ್ಲಿ ಬಂದಿರುವ ಅಂಕಗಳು ಸಮಾಧಾನ ತಂದಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಇದುವರೆಗೆ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಿಸಿಲ್ಲ ಆದರೂ ಮುಂದಿನ ಸೆಮಿಸ್ಟರ್ ಪರೀಕ್ಷೆಯ ಕಾಣಿಸಿಕೊಳ್ಳುತ್ತಿರುವುದು ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ಹೇಳಿದ್ದಾರೆ.
ಇದನ್ನು ತಪ್ಪಿಸಲು ವಿವಿ ಪರೀಕ್ಷಾ ವಿಭಾಗ ಆದಷ್ಟು ಬೇಗ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಿಸಬೇಕು ಪಾಸಾದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ವಾಪಸ್ ನೀಡಬೇಕು ಕೊರೋನಾ ದಿಂದಾಗಿ ಬಹುತೇಕ ಪಾಠಗಳನ್ನು ಆನ್ಲೈನ್ನಲ್ಲಿ ಮಾಡಲಾಗಿದೆ ಈ ಪಾಠವನ್ನು ಕೆಲವೇ ಕೆಲವು ವಿದ್ಯಾರ್ಥಿಗಳು ಮಾತ್ರ ಕೇಳಿದ್ದಾರೆ ಪಠ್ಯಕ್ರಮ ಸಂಪೂರ್ಣವಾಗಿ ಮುಗಿದಿಲ್ಲ ಆದ್ದರಿಂದ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಧನುಷ್ ಗೌಡ‌. ಪ್ರವೀಣ ಶ್ರೀಪಾದ ವಿಜಯ್ ಎಂ‌ ಗೌಡ ಮತ್ತಿತರು ಭಾಗವಹಿಸಿದ್ದರು.

See also  ರಾಷ್ಟಿçಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಶಿಕ್ಷಕರದ್ದು : ಡಾ.ಎಸ್.ಬಿ.ಬಿರಾದಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು