News Kannada
Friday, December 09 2022

ಶಿವಮೊಗ್ಗ

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಸಾಯಿನಾಥ್

Photo Credit :

ಶಂಕರಘಟ್ಟ, ಏ. 01 : ಭಾರತೀಯ ಪತ್ರಿಕೋದ್ಯಮಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್‌ಆತಂಕ ವ್ಯಕ್ತಪಡಸಿದರು.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್‌ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಡಾ. ಶಾಂತಿನಾಥ ದೇಸಾಯಿ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿಅವರು, 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿ”ಯ ಬಗ್ಗೆ ಉಪನ್ಯಾಸ ನೀಡಿದರು.

ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದ್ದು, ಪ್ರಸ್ತುತ ಅವುಗಳ ಸಂಖ್ಯೆ 62ರಷ್ಟಿದೆ. ಕೋವಿಡ್‌ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತುರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು. ಕೋವಿಡ್‌ನ ಮೊದಲ 12ತಿಂಗಳಿನಲ್ಲಿ ಭಾರತದ ಜಿ.ಡಿ.ಪಿ. ಶೇ. 7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು ಆದರೆ ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ. 22ರಷ್ಟು ಏರಿಕೆಯಾಯಿತು. ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲಎಂದು ಟೀಕಿಸಿದರು.

ಜಾಗತಿಕ ಪತ್ರಿಕಾ ಸ್ವಾತಂತ್ರ‍್ಯ ಸೂಚಿಯಲ್ಲಿಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಬಿಲಿಯನೇರ್‌ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲಎಂದು ವಿಶಾದಿಸಿದರು.

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲ ಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವಡಾ. ನವೀನ್‌ಕುಮಾರ್, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಡಾ. ನಾಗ್ಯಾನಾಯ್ಕ್ ಮಾತನಾಡಿದರು. ಕಾರ್ಯಕ್ರಮದಲ್ಲಿಖ್ಯಾತ ಪತ್ರಕರ್ತ ಜಿ. ಎನ್. ಮೋಹನ್, ವಿಭಾಗದಡಾ. ರೇಚಲ್ ಬಾರಿ, ಡಾ. ರಾಮ್ ಪ್ರಸಾದ್, ಡಾ. ಪೂರ್ಣಾನಂದ, ಡಾ. ವೀಣಾ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

See also  ಆರು ವರ್ಷಗಳ ಹಿಂದೆ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ ಆರೋಪಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು