News Kannada

ಕ್ಯಾಂಪಸ್

ಸಂತ ಆಗ್ನೆಸ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ ಕಾಲೇಜು ಉತ್ಸವ - 1 min read

ಮಂಗಳೂರು: ನಗರದ ಸ್ವಾಯತ್ತ ಶಿಕ್ಷಣ ಸಂಸ್ಥೆಯಾಗಿರುವ ಸಂತ ಆಗ್ನೆಸ್ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ಅಂತರ ಕಾಲೇಜು ಉತ್ಸವ ಮೇ 19ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಒಟ್ಟು ಏಳು ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ಥಿಮ್ಯಾಟಿಕ್ ನೃತ್ಯ, ಫೋಟೋಗ್ರಫಿ ಬರವಣಿಗೆ, ಏಕವ್ಯಕ್ತಿ ಹಾಸ್ಯ, ಫ್ಯಾಷನ್ ಶೋ, ಶಾರ್ಕ್ ಟಾಂಕ್, ಮೋಕ್ಪ್ರೆಸ್ ಇವುಗಳನ್ನು ಒಳಗೊಂಡಿರುತ್ತದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಕಾಲದಲ್ಲಿ ಅಡಕಗೊಂಡಿರುವ ಪ್ರತಿಭೆಗಳನ್ನು ಪ್ರದರ್ಶಿಸಲು, ಸಾಮರ್ಥ್ಯಗಳನ್ನು ಗುರುತಿಸಲು ಮತ್ತು ತಂಡಸ್ಪೂರ್ತಿಯನ್ನು ಪ್ರೇರೇಪಿಸಲು ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಸಂಜೆ ಬ್ಯಾಟಲ್ ಆಫ್ ಬ್ಯಾಂಡ್ ಸಂಗೀತ ಕಾರ್ಯಕ್ರಮವನ್ನೂ ಸಿದ್ಧಪಡಿಸಲಾಗಿದೆ.

ಉಭಯ ಜಿಲ್ಲೆಗಳಿಂದ ಮಾತ್ರವಲ್ಲದೆ ದೇಶದ ನಾನಾ ರಾಜ್ಯಗಳಿಂದಲೂ ಕಾಲೇಜು ತಂಡಗಳು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದೆ. ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರ್ಪಡಿಸಲು ಇದೊಂದು ಸದವಕಾಶವಾಗಿದ್ದು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಕಾಲೇಜಿನ ಪ್ರಾಂಶುಪಾಲೆ ಸಿ| ಡಾ. ಎಂ. ವೆನಿಸ್ಸಾ ತಿಳಿಸಿದ್ದಾರೆ.

ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಕಾಲೇಜು ತಂಡಗಳು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಡಾ. ನಾಗೇಶ್ ಆರ್. 9980313384 ಸಂಪರ್ಕಿಸಬಹುದು ಅಥವಾ ವೆಬ್ ಸೈಟ್ :: https://www.stagnescollege.edu.in/ನ್ನು ನೋಡಬಹುದು.

See also  ಮಂಗಳೂರು : ಮೃತರ ಪತ್ತೆಗೆ ಕೋರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು