News Kannada
Thursday, July 07 2022

ಕ್ಯಾಂಪಸ್

ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ - 1 min read

Photo Credit :

ಮಂಗಳೂರು: ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ, ಕ್ರೀಡಾ ವಿಭಾಗದ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 20ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ವ0. ಗುರು ಮೈಕಲ್ ಸಂತುಮಾಯೋರ್ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕು. ಶ್ರಾವ್ಯ. ಎನ್, ಸಹ ಯೋಜನಾಧಿಕಾರಿ ಜೋಬಿನ್ ಜೋಸೆಫ್, ದೈಹಿಕ ಶಿಕ್ಷಕರಾದ ಶ್ರೀಯುತ ಸಂದೀಪ್ ಎಸ್ ರಾವ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಪ್ರತಿನಿಧಿಯಾದ ಪ್ರಿಸ್ಟನ್ ಸಿಕ್ವೇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಡೆನ್ಸನ್ ಡಿಸಿಲ್ವ ಸ್ವಾಗತಿಸಿದರು. ವಿದ್ಯಾರ್ಥಿನಿಗಳಾದ ಡೆವಿನ ಅಂದ್ರಾದೆ ವಂದಿಸಿ, ಶ್ರೀಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

See also  ಮೈಸೂರು: ಪದವೀಧರರ ಪಾಂಡಿತ್ಯ ನೋಡಿ ಸುಸ್ತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು