ಕಾಂತಾವರ: ಆಗಸ್ಟ್ 12 ರಂದು ಪ್ರಕೃತಿ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ “ನಶಾ ಮುಕ್ತ ಭಾರತ ಅಭಿಯಾನ” ಎನ್ನುವ ಯೋಜನೆಯ ಅಡಿಯಲ್ಲಿ ಶಾಲಾ ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಮಾದಕ ವ್ಯಸನದ ವಿರುದ್ಧ ಪ್ರಮಾಣ ಸ್ವೀಕರಿಸುವ ಜಾಗೃತಿ ಕಾರ್ಯಕ್ರಮವನ್ನು ಕೈಗೊಂಡಿದ್ದರು.
ಪ್ರಕೃತಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕುಮಾರಿ ವಿನ್ಯಾ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರದ ಉಪನ್ಯಾಸಕಿಯಾದ ಶ್ರೀಮತಿ ಕೆ . ಸಿ. ಅಕ್ಷತಾ ಕುಮಾರಿ ರವರು ಮಾದಕ ವ್ಯಸನದ ವರ್ಜನೆಯ ಜಾಗೃತಿಯನ್ನು ಕೈಗೊಳ್ಳುವಂತೆ ಪ್ರತಿಜ್ಞಾ ಭೋದಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಪ್ರಸಾದ್ ರವರು ಉಪಸ್ಥಿತರಿದ್ದರು.
ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಪ್ರಸಿದ್ಧ್ ಎಂ.ಪೂಜಾರಿ ರವರು ಕಾರ್ಯಕ್ರಮದ ನಿರೂಪಣೆಯನ್ನು, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಲವಿಟಾ ವಾಸ್ ರವರು ವಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದಾದವರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.