ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮೈಸೂರು ವಲಯದ 2022-23ರ ಅಂತರ ಕಾಲೇಜು ಫುಟ್‍ಬಾಲ್ ಪಂದ್ಯಾವಳಿಯು ಆ. 17 ರಿಂದ 19 ರವರೆಗೆ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಪಂದ್ಯಾವಳಿಯನ್ನು ಆ. 17ರಂದು ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ಉದ್ಘಾಟಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ವಿವಿಧ ವಿದ್ಯಾಸಂಸ್ಥೆಗಳಿಂದ ಒಟ್ಟು 48 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದವು.
ಆ.19ರಂದು ಸಮಾರೋಪ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆಯನ್ನು ಹಮ್ಮಿಕೊಳ್ಳಲಾಯಿತು. ಮೂರು ದಿನಗಳ ಅತ್ಯಾಕರ್ಷಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೈಸೂರು ವಲಯದ ಅಂತರ ಕಾಲೇಜು ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ನಾಟೆಕಲ್, ಮಂಗಳೂರು ಪ್ರಥಮ ಮತ್ತು ತೇಜಸ್ವಿನಿ ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕುಡುಪು, ಮಂಗಳೂರು ದ್ವಿತೀಯ ಸ್ಥಾನವನ್ನು ಗೆದ್ದುಕೊಂಡಿತು.
ಗೋವಿಂದ್, ತೇಜಸ್ವಿನಿ ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕುಡುಪು ಅವರಿಗೆ ಉತ್ತಮ ಫಾರ್ವಡ್ ಆಟಗಾರ, ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ನಾಟೆಕಲ್ ಆಟಗಾರದ ಶಮ್ಮಸ್ ಉತ್ತಮ ಡಿಫೆಂಡರ್ ಹಾಗೂ ಹಾದಿ ರೆಹಮಾನ್ ಉತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಪಡೆದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ಫಾದರ್ ರೋಶನ್ ಕ್ರಾಸ್ತಾ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪಾಂಶುಪಾಲರಾದ ಡಾ ಇ ಎಸ್ ಜೆ ಪ್ರಭು ಕಿರಣ್, ದೈಹಿಕ ಶಿಕ್ಷಣ ಬೋಧಕರಾದ ಚೆನ್ನಕೇಶವ ಎಂ ಜಿ, ಡಾ ಹಾಫಿಜ್ ಎಸ್ ಸಂಯೋಜಕರು, ಕ್ರೀಡಾ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸಮಾರೋಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.