ಮಂಗಳೂರು: ಭಾರತದ ದ್ವಿತೀಯ ರಾಷ್ಟ್ರಪತಿ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಸೆಪ್ಟೆಂಬರ್ 5 (ಸೋಮವಾರ) ಬೆಳಿಗ್ಗೆ 10.30 ಕ್ಕೆ ಶಿಕ್ಷಕರ ದಿನಾಚರಣೆ ಆಯೋಜಿಸಲಾಗಿದೆ.
ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ವಿಶ್ವಾಂತ ಕುಲಪತಿ ಪ್ರೊ. ಬಿ ಎ ವಿವೇಕ ರೈ ಅವರು ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ, ಎಂದು ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಅವರ ಪ್ರಕಟಣೆ ತಿಳಿಸಿದೆ.