News Kannada
Wednesday, December 07 2022

ಕ್ಯಾಂಪಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ವೇದವ್ಯಾಸ ಧ್ಯಾನ ಮಂದಿರದಲ್ಲಿ ದೀಪಾವಳಿ ಆಚರಣೆ

Kalladka: Deepavali celebrations at Sri Rama Higher Primary School Vedavyasa Dhyana Mandir
Photo Credit : By Author

ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ವೇದವ್ಯಾಸ ಧ್ಯಾನ ಮಂದಿರದಲ್ಲಿ ಬೆಳಕಿನ ಹಬ್ಬವಾದ ದೀಪಾವಳಿಯನ್ನು ದಿನಾಂಕ 25.10.2022ರಂದು ಆಚರಿಸಲಾಯಿತು.

“ದೀಪಾವಳಿ ಎಂದರೆ ಕೇವಲ ಪಟಾಕಿ ಹಚ್ಚುವುದು, ಹಣತೆಉರಿಸುವುದಷ್ಟಕ್ಕೆ ಸೀಮಿತವಲ್ಲ. ಈ ಆಚರಣೆಯ ಹಿಂದೆ ಹಲವು ಪುರಾಣಕಾಲದಕತೆ, ಸಂಪ್ರದಾಯ, ಸಂಸ್ಕೃತಿಇದೆ. ಲೋಕಕಲ್ಯಾಣಕ್ಕಾಗಿ ನರಕಾಸುರನನ್ನು ಚತುದರ್ಶಿಯಂದು ಶ್ರೀಕೃಷ್ಣನು ವಧಿಸಿರುತ್ತಾನೆ. ಈ ದಿನವನ್ನು ನರಕ ಚತುದರ್ಶಿಯಾಗಿ ಆಚರಿಸಲಾಗುತ್ತದೆ. ಮಾರನೆಯ ದಿನ ದೀಪಾವಳಿಯ ಅಮಾವ್ಯಾಸೆಯಾಗಿದ್ದು, ಈ ದಿನ ಲಕ್ಷ್ಮೀಪೂಜೆ ಮಾಡಲಾಗುತ್ತದೆ. ಮಹಾವಿಷ್ಣುವಿನ ಪತ್ನಿಯೂ ಆದ ಮಹಾಲಕ್ಷ್ಮೀಯನ್ನು ಆರಾಧಿಸುವ ಹಬ್ಬವೇ ಧನಲಕ್ಷ್ಮೀ ಪೂಜೆ. ಹಾಗಾಗಿ ಅತ್ಯಂತ ಸಂತೋಷದಿಂದ ಕಾರ್ತಿಕ ಮಾಸದ ಆರಂಭದ ಈ ಅಮಾವ್ಯಾಸೆಯ ಮಹಾರಾತ್ರಿಯಲ್ಲಿ ಮಹಾಲಕ್ಷ್ಮೀಗೆ ಮಹದಾನಂದದಿಂದ ದೀಪರಾಧನೆಯೊಡನೆ ಲಕ್ಷ್ಮೀ ಪೂಜೆಯನ್ನು ಮಾಡುತ್ತಾರೆ.

ಹಬ್ಬದ ಮೂರನೆಯ ದಿನವನ್ನು ಬಲಿಪಾಡ್ಯಮಿಯಾಗಿಆಚರಿಸಲಾಗುತ್ತಿದೆ. ಅವತ್ತು ಬಲಿಚಕ್ರವರ್ತಿ ಭೂಲೋಕ ಸಂಚಾರಕ್ಕೆ ಬರುತ್ತಾನೆ ಎಂಬ ನಂಬಿಕೆಯೂ ಇದೆ. ಈ ದಿನ ಬಲೀಂದ್ರ ಪೂಜೆಯೂ ನಡೆಯುತ್ತದೆ. ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ಅಜ್ಞಾನವೆಂಬ ಕತ್ತಲೆಯನ್ನು ಅಳಿಸಿ, ಬೆಳಕಿನ ಜ್ಞಾನವನ್ನು ಪಸರಿಸುವ ಹಬ್ಬವಾಗಿದೆ. ರೈತರಿಗೆ ನೆಲ-ಜಲದ ಹಬ್ಬವಾದರೆ, ವಿದ್ಯಾರ್ಥಿಗಳಿಗೆ ಜ್ಞಾನವೆಂಬ ಬೆಳಕಿನ ಹಬ್ಬವಾಗಿದೆ.” ಎನ್ನುತ್ತಾ ಶ್ರೀರಾಮ ಶಾಲೆಯ ಮುಖ್ಯೊಪಾಧ್ಯಾಯರಾದ ರವಿರಾಜ್‌ ಕಣಂತೂರುರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದ ಮೊದಲಿಗೆ ಭಾರತಮಾತೆಗೆ ದೀಪಪ್ರಜ್ವಲನೆ ಹಾಗೂ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನೆ ನಡೆಯಿತು. ಮುಖ್ಯೋಪಾಧ್ಯಾಯರಾದ ರವಿರಾಜ್‌ ಕಣಂತೂರು ದೀಪ ಉರಿಸುವ ಮೂಲಕ ಈ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ಸಾಲಾಗಿ ಜೋಡಿಸಿಟ್ಟ ಹಣತೆಗಳನ್ನು ವಿದಾರ್ಥಿಗಳು ಬೆಳಗಿಸಿದರು. ಈ ಸಂದರ್ಭದಲ್ಲಿಎಲ್ಲಾಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

See also  ಆಳ್ವಾಸ್‌ನ ವೃತ್ತಿಪರ ವಾಣಿಜ್ಯ ವಿಭಾಗದ ಎ.ಸಿ.ಸಿ.ಎ. ಕೋರ್ಸಿಗೆ  ಇಂಗ್ಲೆಂಡ್ ನಿಂದ ಅಧಿಕೃತ ಕಲಿಕಾ ಕೇಂದ್ರದ ಮಾನ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು