News Kannada
Thursday, December 08 2022

ಕ್ಯಾಂಪಸ್

ಬೆಳ್ತಂಗಡಿ: ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು

Along with value-based education, the illumination of talent is also important
Photo Credit : By Author

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು. ಇದಕ್ಕೆ ಕೇವಲ ಪಠ್ಯ ವಿಷಯ ಅಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಇದರೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಪ್ರತಿಭೆಗಳ ಪ್ರಕಾಶವೂ ಮುಖ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ ಹೇಳಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ದಕ ಜಿಲ್ಲಾ ಶಿಕ್ಷಣ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.

ಪ್ರಿನ್ಸಿಪಾಲ್ ಪ್ರೊ. ಎನ್. ದಿನೇಶ ಚೌಟ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ವೈಸ್ ಪ್ರಿನ್ಸಿಪಾಲ್ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕ ಡಾ.ರಾಜೇಶ್ ಬಿ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ದಿವ್ಯಾ ಕುಮಾರಿ ಧನ್ಯವಾದ ಅರ್ಪಿಸಿದರು. ದೀಕ್ಷಿತ್ ರೈ ನಿರೂಪಿಸಿದರು. ಒಟ್ಟು 40 ಕಾಲೇಜುಗಳಿಂದ ಸುಮಾರು 550 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

See also  ರೋಮ್: ರಾಜೀನಾಮೆ ನೀಡಿದ ಇಟಲಿ ಪ್ರಧಾನಿ ಮಾರಿಯೋ ದ್ರಾಘಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು