News Kannada
Sunday, December 04 2022

ಕ್ಯಾಂಪಸ್

ಉಜಿರೆ: ನ.28 ರಂದು ಎಸ್.ಡಿ.ಎಂ ಓರಿಯೆಂಟೇಶನ್ ಕಾರ್ಯಕ್ರಮ

Photo Credit : Facebook

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ.

ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.

ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಎಸ್.ಡಿ.ಎಂ.ನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯನಿರ್ವಹಣೆಯ ಸಮಗ್ರ ಸ್ವರೂಪವನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಈ ಸಾಂಸ್ಥಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಈ ಸಲದ ಕಾರ್ಯಕ್ರಮವನ್ನು ಮೂಲತಃ ಅಳದಂಗಡಿಯವರಾಗಿರುವ, ಪ್ರಸ್ತುತ ಲಂಡನ್ ಸ್ಕೂಲ್ ಆಫ್ ಮೆಡಿಸಿನ್‌ನ ಪ್ರಾಧ್ಯಾಪಕ, ನವಜಾತಶಿಶು ತಜ್ಞ ಪ್ರೊ. ನರೇಂದ್ರ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ಆರಂಭಗೊಳ್ಳಲಿದೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯಚಂದ್ರ ಪಿ.ಎನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

See also  ಮಂಗಳೂರು: ಸುಮನ ಬೋಳಾರ್ ಇವರಿಗೆ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು