News Kannada
Tuesday, February 07 2023

ಕ್ಯಾಂಪಸ್

ಮಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ಅಲ್ಪಸಂಖ್ಯಾತರು ಪ್ರಯತ್ನಿಸಬೇಕು ಎಂದ ಸುಹಾನ ಸಯ್ಯದ್

Minorities should try for competitive exams, says Suhana Sayyed
Photo Credit : By Author

ಮಂಗಳೂರು: ರಾಷ್ಟ್ರೀಯ ಭಾವೈಕ್ಯತಾ ಸಪ್ತಾಹ- 2022 ರ ಭಾಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ವಾಣಿಜ್ಯ ಸಂಘ ಮತ್ತು ಗ್ರಾಹಕ ವೇದಿಕೆ ವತಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮʼ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರಿನ ಬರಾಕ ಇಂಟರ್ನ್ಯಾಷನಲ್ ಕಾಲೇಜಿನ ಉಪನ್ಯಾಸಕಿ ಸುಹಾನ ಸಯ್ಯದ್ ಎಂ, ಪ್ರಧಾನಿಯವರ ಯೋಜನೆಯ ಬಗ್ಗೆ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿ ವೇತನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅದರ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಸಂವಿಧಾನ ಆಚರಣೆಯ ಅಂಗವಾಗಿ ನವಂಬರ್ 26 ರಂದು ವಿದ್ಯಾರ್ಥಿಗಳಿಂದ ಪ್ರಮಾಣ ವಚನ ಮಾಡಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿಸುವ ಪ್ರಯತ್ನ ನಡೆದಿದೆ. ಅಲ್ಲದೆ ಕಾಲೇಜಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸರಳವಾಗಿ ನೆರೆವೇರಿಸಿದ್ದೇವೆ, ಎಂದರು.

ಕಾರ್ಯಕ್ರಮದ ಸಂಯೋಜಕ, ವಾಣಿಜ್ಯ ಸಂಘ ಮತ್ತು ಗ್ರಾಹಕ ವೇದಿಕೆಗಳ ಸಹಾಯಕ ನಿರ್ದೇಶಕ ಡಾ. ಎ ಸಿದ್ಧಿಕ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ನಿಧಿಶ್ರೀ ಪ್ರಾರ್ಥಿಸಿ, ವಿಭಾಗದ ಉಪನ್ಯಾಸಕಿ ಡಾ. ಸೌಮ್ಯ ಪ್ರವೀಣ್.ಕೆ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಪೂಜಾರಿ ಜಯಶ್ರೀ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

See also  ಎಸ್. ಡಿ. ಎಂ ನೂತನ ದ್ಯುತಿ ದೂರದರ್ಶಕಕ್ಕೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು